ಮೈಸೂರು

ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ವೇಳೆ ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ  ಬಿಗ್ ರಿಲೀಫ್ ದೊರಕಿದೆ. ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿದ್ದು, ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ರತ್ನಕಲಾ ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ್ದು, ಜಾಮೀನು ಮಂಜೂರು ಮಾಡಿದ್ದಾರೆ.

ಕೆ.ಎಸ್.ರಂಗಪ್ಪ ಅವರು ಕುಲಪತಿಯಾಗಿದ್ದ ವೇಳೆ  ಹಣ ದುರುಪಯೋಗ ಮಾಡಿದ್ದಾರೆ ಎಂದು ಮೈಸೂರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗಸ್ಟ್ 20ರಂದು ರಂಗಪ್ಪ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು. ಇದನ್ನು ಪ್ರಶ್ನಿಸಿದ ರಂಗಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಎಫ್.ಐ.ಆರ್ ಗೆ ಸ್ಟೇ ನೀಡಿದ್ದರು. ಎಫ್.ಐ.ಆರ್ ಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತಲ್ಲದೇ, 15ದಿನಗಳ ಕಾಲ ಬಂಧಿಸದಂತೆ ಆದೇಶ ನೀಡಿತ್ತು.

ಮಂಗಳವಾರ ಹೈಕೋರ್ಟ್ ರಂಗಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Leave a Reply

comments

Related Articles

error: