ಪ್ರಮುಖ ಸುದ್ದಿ

ಮಾಧ್ಯಮಗಳ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ

ರಾಜ್ಯ(ಬೆಂಗಳೂರು)ಮೇ.22:- ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಪತ್ರಿಕೆಗಳಲ್ಲಿ ಇಂದು ಪ್ರಕಟವಾಗಿರುವ ಸುದ್ದಿಯ ಬಗ್ಗೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ .

ಕಾಂಗ್ರೆಸ್  ನಾಯಕರಲ್ಲಿ ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಅವರನ್ನು ಸಂಪುಟಕ್ಕೆ ಸೇರ್ಪಡಿಸಲು ತಮ್ಮ ವಿರೋಧವಿದೆ ಎಂಬ ಅರ್ಥದಲ್ಲಿ ಪ್ರಕಟವಾಗಿರುವ  ಸುದ್ದಿ ಕುಚೋದ್ಯದಿಂದ ಕೂಡಿದ್ದು ಜನರನ್ನು ದಾರಿತಪ್ಪಿಸುವ ಕೆಲಸವಾಗಿದೆ ಎಂದು ತಿಳಿಸಿದ್ದಾರೆ

ಸಚಿವ ಸಂಪುಟ ರಚನೆಯನ್ನು ನಿಯೋಜಿತ ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚಿಸಿ ನಿರ್ಧರಿಸಲಿದ್ದಾರೆ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ .

ಯಾವುದೇ ಮಾಧ್ಯಮ ಸುದ್ದಿ ಪ್ರಕಟಣೆಗೆ ಮುನ್ನ ಅಧಿಕೃತ ಮಾಹಿತಿ ಪಡೆಯಬೇಕು .ಈ ರೀತಿಯ ಆಧಾರ ರಹಿತ ಸುದ್ದಿ ಪ್ರಕಟಣೆ ಪತ್ರಿಕೋದ್ಯಮಕ್ಕೆ ಮಾರಕ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: