ಮೈಸೂರು

ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಅವರಿಗೆ ಮಾತೃ ವಿಯೋಗ

ಮೈಸೂರು,ಮೇ.22:- ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕನ್ನಡಪ್ರಭ ಪತ್ರಿಕೆಯ ಸ್ಥಾನಿಕ ಸಂಪಾದಕ ಅಂಶಿ ಪ್ರಸನ್ನಕುಮಾರ್ ಅವರ ತಾಯಿ  ಗೌರಮ್ಮ (75) ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.

ಕಳೆದ ಕೆಲ‌ ದಿನಗಳಿಂದ ಅನಾರೋಗ್ಯದಿಂದ ‌ಬಳಲುತ್ತಿದ್ದ ಅವರು ಸ್ವಗ್ರಾಮ ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿ ಗ್ರಾಮದಲ್ಲಿ ನಿಧನರಾಗಿದ್ದಾರೆ. ಪತಿ ಶಿವೇಗೌಡ, ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಸೇರಿದಂತೆ ನಾಲ್ವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸಂಜೆ ವೇಳೆಗೆ ಅಂಬಿಗರಹಳ್ಳಿ ಗ್ರಾಮದಲ್ಲಿ ನೆರವೇರಿದೆ.

ಸುತ್ತೂರು ಶ್ರೀ ಮಠದ‌ ಪರವಾಗಿ ಆಲಮಟ್ಟಿ ಶ್ರೀಗಳು, ಮಾಜಿ ಶಾಸಕ ವಾಸು, ನವನಗರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಸಂತ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಸೇರಿದಂತೆ ಹಲವು ಪ್ರಮುಖರು ಮೃತರ ಅಂತ್ಯಕ್ರಿಯೆ ಕಾರ್ಯದಲ್ಲಿ ಭಾಗಿಯಾಗಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: