ಕರ್ನಾಟಕ

ಅರಿವು ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ

ಮಂಡ್ಯ (ಮೇ 22): 2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ ಸಿ.ಇ.ಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮೂಲಕ ಆಹ್ವಾನಿಸಲಾಗಿದೆ.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್‍ಸೈಟ್‍ನಲ್ಲಿ ಲಭ್ಯವಿರುವ www.karnataka.gov.in/dbcdc ಮತ್ತು Username-infra/dbcdcarivu ಮತ್ತು Passward-DB(d#098 ಅನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಭರ್ತಿಮಾಡುವುದು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಸಿ.ಇ.ಟಿ./ ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ಹಾಗೂ ಆಧಾರ್ ಕಾರ್ಡ್ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ಲ್ಲಿ ಜೂನ್ 8 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಂಡ್ಯ ಇವರನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: