ಮೈಸೂರು

ದೇಶದ ಒಳಿತಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಡಾ.ಬಿ.ಆರ್ ಅಂಬೇಡ್ಕರ್: ಕೃಪಾಕರ

ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರ ಮಾನಸಗಂಗೋತ್ರಿ ಮತ್ತು ಮಹಾಬೋಧಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ 60ನೇ ವರ್ಷದ ಪರಿನಿರ್ವಾಣದ ನೆನೆಪಿನ ಅಂಗವಾಗಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಛಾಯಾಚಿತ್ರ ಹಾಗೂ ಚಲನಚಿತ್ರ ಪ್ರದರ್ಶನ ಮತ್ತು ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಡಾ.ಬಿ.ಆರ್. ಅಂಬೇಡ್ಕರ್ ಸಂಶೊಧನಾ ಹಾಗೂ ವಿಸ್ತರಣ ಕೇಂದ್ರದಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಪ್ರಖ್ಯಾತ ಅಂತಾರಾಷ್ಟ್ರೀಯ ವನ್ಯಜೀವಿ ಪರಿಸರ ತಜ್ಞ ಕೃಪಾಕರ  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅಂಬೇಡ್ಕರ್ ಒಬ್ಬ ಮಹಾನ್ ಮೇಧಾವಿ. ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಬೇಕಾದರೆ ಅವರನ್ನು ಹೆಚ್ಚಾಗಿ ಅರ್ಥಮಾಡಿಕೊಳ್ಳಬೇಕು. ಆದರೆ, ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ‍್ಯವಿಲ್ಲ. ಏಕೆಂದರೆ, ಅವರು ವ್ಯಾಪ್ತಿಗೆ ಸಿಗದ ಮಹನೀಯ. ದೇಶದ ಒಳಿತಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಸಂವಿಧಾನ ರಚನೆಯ ಮೂಲಕ ದೇಶದಲ್ಲಿ ಹೊಸ ಸಂಚಲನ ಮೂಡಿಸದವರು ಬಾಬಾ ಸಾಹೇಬ್ ಅಂಬೇಡ್ಕರ್. ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಪದಗಳು ಸಿಗುವುದಿಲ್ಲ ಎಂದು ಅವರ ಸಾಧನೆಯನ್ನು ಹಾಡಿ ಹೊಗಳಿದರು.

ನೂರಾರು ವಿದ್ಯಾರ್ಥಿಗಳು ಸೇರಿದಂತೆ ಡಾ.ಬಿ.ಆರ್. ಅಂಬೇಡ್ಕರ್ ಕುರಿತಾದ ಛಾಯಾಚಿತ್ರ ವೀಕ್ಷಿಸಿದರು. ನಂತರ ಅವರ ಜೀವನ ಚರಿತ್ರೆ ಕುರಿತಾದ 3 ಗಂಟೆಗಳ ಚಲನಚಿತ್ರ ಪ್ರದರ್ಶನವೂ ಸಹ ಇತ್ತು. ಈ ಸಂದರ್ಭದಲ್ಲಿ ಮುಕ್ತ ಸಂವಾದದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಮಹಾಬೋಧಿ ಶಾಲೆಯ ಪ್ರಾಂಶುಪಾಲ ಭೂತೇಶ್, ಸಂಯೋಜನಾಧಿಕಾರಿ ಡಾ.ಎಸ್.ನರೇಂದ್ರಕುಮಾರ್ ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: