ಕರ್ನಾಟಕ

ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ್: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು (ಮೇ 23): ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಅವರು ಪತ್ರ ಬರೆದಿರುವುದುದಾಗಿ ಪರಮೇಶ್ವರ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗಲಿದೆ. ನನಗಿಂತ ಉತ್ತಮರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ಉಪಮುಖ್ಯಮಂತ್ರಿಯಾಗುತ್ತಿರುವುದರಿಂದ ಸರಕಾರದ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕಿದೆ. ಎರಡು ಹುದ್ದೆಗಳನ್ನು ಏಕಕಾಲದಲ್ಲಿ ನಿಭಾಯಿಸಲು ಕಷ್ಟವಾಗುತ್ತದೆ, ಹೀಗಾಗಿ ರಾಜೀನಾಮೆ ನೀಡಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಇತಿಹಾಸದಲ್ಲೇ ಸುದೀರ್ಘವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದಕ್ಕಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಹೈಕಮಾಂಡ್ ಸೂಚನೆಯಂತೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲಾಗಿದೆ. ಶೀಘ್ರದಲ್ಲೇ ಹೈಕಮಾಂಡ್ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಪರಮೇಶ್ವರ್ ತಿಳಿಸಿದರು. (ಎನ್.ಬಿ)

Leave a Reply

comments

Related Articles

error: