ಸುದ್ದಿ ಸಂಕ್ಷಿಪ್ತ

ಆಡಳಿತ ನ್ಯಾಯಾಧೀಕರಣ ತರಬೇತಿ : ಅರ್ಜಿ ಆಹ್ವಾನ

ಮೈಸೂರು, ಮೇ.24:-  ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.
ಭರ್ತಿ ಮಾಡಿದ ಅರ್ಜಿಯನ್ನು ಜೂನ್ 20 ರೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕಡೆಯ ದಿನಾಂದೊಂದು ಕಾನೂನು ಪದವಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು, ವಯೋಮಿತಿ 40 ವರ್ಷ ಮೀರಿರಬಾರದು, ವಕೀಲರ ಸಂಘದಲ್ಲಿ ಅಭ್ಯರ್ಥಿಯ ಹೆಸರನ್ನು ನೋಂದಾಯಿಸಿರಬೇಕು. ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಡಾ. ಬಾಬು ಜಗಜೀವನರಾಂ ಭವನ, ಆದಿಪಂಪ ರಸ್ತೆ, ಪಡುವಾರಹಳ್ಳಿ, ಒಂಟಿಕೊಪ್ಪಲು ಪೂರ್ವ ಬಡಾವಣೆ, ಮೈಸೂರು ದೂರವಾಣಿ ಸಂಖ್ಯೆ 821-2427140 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: