ಮೈಸೂರು

ವಿಶ್ವ ಶುಶ್ರೂಷಕಿಯರ ದಿನಾಚರಣೆಯ ಪ್ರಯುಕ್ತ ಆರೋಗ್ಯ ತಪಾಸಣೆ ಶಿಬಿರ

ಮೈಸೂರು,ಮೇ.24:- ಮೈಸೂರು ತಾಲೂಕು ದೇವಲಾಪುರ  ಗ್ರಾಮದಲ್ಲಿ ಶ್ರೀ ನಟರಾಜ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಟಿ.ಎಸ್. ಚಂದ್ರಶೇಖರಯ್ಯ ಇನ್ಸಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸ್ ನ  ವತಿಯಿಂದ ವಿಶ್ವ ಶುಶ್ರೂಷಕಿಯರ ದಿನಾಚರಣೆಯ ಪ್ರಯುಕ್ತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ನಡೆದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನಿ. ಪ್ರ. ಸ್ವ. ಜಡೇಸ್ವಾಮಿಗಳು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠ, ದೇವಲಾಪುರ ಇವರು ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಅವರು ಶ್ರೀ ನಟರಾಜ ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ಹಾಗೂ ಇಂದು ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿರುವುದು ಬಹಳ ಉಪಯುಕ್ತವಾದುದಾಗಿದೆ, ಇದರಿಂದ ಬಹಳಷ್ಟು ಹಳ್ಳಿಯ ಜನರಿಗೆ ಅನುಕೂಲವಾಗಲಿದೆ ಎಂದರಲ್ಲದೇ ಈ ಅವಕಾಶವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು,

ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿಗಳಾದ ಡಾ.ಗೀತಾ ಮಾತನಾಡಿ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಮತ್ತು ಆರೋಗ್ಯ ತಪಾಸಣೆ ಮಾಡಲು ಶಿಕ್ಷಣ ಸಂಸ್ಥೆಗಳು ಕೈಜೋಡಿಸುವುದರಿಂದ ಸಮಾಜದ ಬಡ ಜನತೆಗೆ ಅನುಕೂಲವಾಗುತ್ತದೆ ಎಂದರು.

ಗ್ರಾಮದ ವಿವಿಧ ರಸ್ತೆಗಳಲ್ಲಿ ಆರೋಗ್ಯ ಜಾಗೃತಿ ಜಾಥಾ ನಡೆಸಲಾಯಿತು, ಜಾಥಾದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಮತ್ತು ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ಬಾವಲಿ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು,

ಕಾರ್ಯಕ್ರಮದಲ್ಲಿ  ಪಂಚಾಯತ್ ಸದಸ್ಯ ಎ ಮಹೇಶ್,   ಶೈಕ್ಷಣಿಕ ಸಂಯೋಜನಾಧಿಕಾರಿ ಶಿವಕುಮಾರ ಎಂ. ಪ್ರಾಂಶುಪಾಲರಾದ ಡಾ. ಪದ್ಮನಾಭ ಎಂ.ಸಿ.  ಇನ್ಸ್‍ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸ್ನ ಟಿ.ಎಸ್. ಚಂದ್ರಶೇಖರಯ್ಯ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: