ಸುದ್ದಿ ಸಂಕ್ಷಿಪ್ತ
ರಾಜ್ಯಮಟ್ಟದ ವಿಚಾರ ಸಂಕಿರಣ
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಡಿ.8 ರಂದು ಬೆ.10.30 ಕ್ಕೆ ಗಾನಭಾರತೀ ವೀಣೆಶೇಷಣ್ಣ ಭವನದಲ್ಲಿ ಭರತನಾಟ್ಯ ವಿಭಾಗದ ವತಿಯಿಂದ ‘ನೃತ್ಯದ ವಿವಿಧ ಆಯಾಮಗಳು’ ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಅನನ್ಯ ಸಂಸ್ಥೆಯ ನಿರ್ದೇಶಕ ಡಾ.ಆರ್.ವಿ. ರಾಘವೇಂದ್ರ ಉದ್ಘಾಟನೆ ಮಾಡಲಿದ್ದಾರೆ.