ಮೈಸೂರು

ಮೇ.27ರಂದು ಶಾಸಕ ಎಸ್.ಎ.ರಾಮದಾಸ್ ಅವರಿಗೆ ಅಭಿನಂದನೆ

ಮೈಸೂರು,ಮೇ.25:- ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಬ್ರಾಹ್ಮಣ ಒಕ್ಕೂಟ ಮೈಸೂರು ವತಿಯಿಂದ ಮೇ.27ರಂದು ಶಾಸಕ ಎಸ್.ಎ.ರಾಮದಾಸ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಾಜ ಸೇವಕ ಡಾ.ರಘುರಾಂ ವಾಜಪೇಯಿ ಮಾತನಾಡಿ, ಮೇ.27ರಂದು ಸಂಜೆ 4ಗಂಟೆಗೆ ಸರಸ್ವತಿಪುರಂನ ಕೃಷ್ಣಧಾಮದಲ್ಲಿ ಪಾಂಡವಪುರ ಅಂಬಾವನದ ಡಾ.ವಿದ್ಯಾಹಂಸ ಭಾರತಿ ಮಹಾರಾಜ್ ದಿವ್ಯ ಸಾನಿಧ್ಯವಹಿಸಲಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅಧ್ಯಕ್ಷತೆವಹಿಸಲಿದ್ದಾರೆ. ಕಿರುತೆರೆ ಖ್ಯಾತಿಯ ಖ್ಯಾತ ಗಾಯಕ ಶಶಿಧರ್ ಕೋಟೆ ಅವರಿಂದ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀರಂಗಪಟ್ಟಣ ಶಾಶ್ವತಿ ಧಾರ್ಮಿಕ ಸೇವಾ ಸಮಿತಿಯ ಭಾನುಪ್ರಕಾಶ್ ಶರ್ಮಾ, ಬ್ರಾಹ್ಮಣ ಸಂಘದ ಡಿ.ಟಿ.ಪ್ರಕಾಶ್, ಶೇಷಾದ್ರಿ ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: