ಕರ್ನಾಟಕಪ್ರಮುಖ ಸುದ್ದಿ

ವಿಶ್ವಾಸಮತ ಯಾಚನೆಗೂ ಮೊದಲೇ ಬಿಜೆಪಿ ಶಾಸಕರ ಸಭಾತ್ಯಾಗ

ಬೆಂಗಳೂರು (ಮೇ 25): ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವ ಮೊದಲೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತ ನಿರ್ಣಯ ಮಂಡಿಸಿ ಒಂದು ಗಂಟೆಗೂ ಹೆಚ್ಚು ಕಾಲ ಭಾಷಣ ಮಾಡಿದರು. ಕುಮಾರಸ್ವಾಮಿ ಅವರ ಭಾಷಣದ ಬಳಿಕ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸುದೀರ್ಘ ಭಾಷಣವನ್ನು ಮಾಡಿದರು. ರೈತರ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ಕೊಡುವುದಾಗಿ ಹೇಳಿದರು.

ತಮ್ಮ ಭಾಷಣದಲ್ಲಿ ಆಡಳಿತ ಪಕ್ಷದ ವಿರುದ್ಧ ಹಲವು ಆರೋಪಗಳನ್ನು ಮಾಡಿದ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು, ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿ ಸದನ ನಗೆಗಡಲಲ್ಲಿ ತೇಲುವಂತೆ ಮಾಡಿದರು.

ವಿಶ್ವಾಸಮತಯಾಚನೆ ನಿರ್ಣಯ ಮಂಡನೆ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, ‘ರೈತರ ಸಾಲಮನ್ನಾ ಬಗ್ಗೆ ಬಿಜೆಪಿಯಿಂದ ಕಲಿಯಬೇಕಿಲ್ಲ. ಈಗ ಯಡಿಯೂರಪ್ಪ ರೈತರ ಸಾಲಮನ್ನಾ ಬಗ್ಗೆ ಮಾತನಾಡುತ್ತಾರೆ. ಆದರೆ, 2010ರಲ್ಲಿ ಯಡಿಯೂರಪ್ಪ ಅವರು ಸಾಲಮನ್ನಾಕ್ಕೆ ಹಣವಿಲ್ಲ ಎಂದಿದ್ದರು’ ಎಂದು ಹೇಳಿದರು.

ಕುಮಾರಸ್ವಾಮಿ ಅವರ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, ಇಂದು ಸಂಜೆಯೊಳಗೆ ಸಾಲಮನ್ನಾ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸೋಮವಾರ ಕರ್ನಾಟಕ ಬಂದ್ ನಡೆಸುತ್ತೇವೆ ಎಂದು ಸದನದಲ್ಲಿ ಘೋಷಣೆ ಮಾಡುತ್ತಾ ಸಭಾತ್ಯಾಗ ಮಾಡಿದರು. (ಎನ್.ಬಿ)

Leave a Reply

comments

Related Articles

error: