ಮೈಸೂರು

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತೆ ಸಾವು

ಮೈಸೂರು,ಮೇ.28:-  ಕಳೆದ ಕೆಲವು ದಿನಗಳ ಹಿಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆಸರೆಯ ಆಯಿಷಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೆಸರೆಯ ಉಸ್ಮಾನಿಯಾ ಬ್ಲಾಕ್ ನಿವಾಸಿ ಸೈಯದ್ ರೂಬಾನ್ ಎಂಬವರ ಪತ್ನಿ ಆಯಿಷಾ (19) ಗೆ ಕಳೆದ ಏಳು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ವರದಕ್ಷಿಣೆ ತರುವಂತೆ ಪತಿ ಹಾಗೂ ಕುಟುಂಬಿಕರು ಆಯಿಷಾರನ್ನು ಪೀಡಿಸುತ್ತಿದ್ದರು. ಇದೇ ಕಾರಣಕ್ಕಾಗಿ ಆಯಿಷಾ ಬುಧವಾರ ಸೀಮೆಎಣ್ಣೆ ಮೈಮೈಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ರಾತ್ರಿ ಸಾವನ್ನಪ್ಪಿದ್ದಾರೆ. ಆಯಿಷಾ ಪೋಷಕರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಎನ್.ಆರ್.ಠಾಣೆಯಲ್ಲಿ ಪತಿ ಮತ್ತು ಕುಟುಂಬಿಕರ ವಿರುದ್ಧ ದೂರು ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: