ಕರ್ನಾಟಕದೇಶ

ಕರ್ನಾಟಕ ಸಂಪುಟ ರಚನೆಯ ಕಸರತ್ತು: ಗುಲಾಂ ನಬಿ ಆಜಾದ್‍ಗೆ ಹೊಣೆಗಾರಿಕೆ

ಹೊಸದಿಲ್ಲಿ (ಮೇ 28): ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದಲ್ಲಿ ರಚನೆಯಾಗಿರುವ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಹೊಣೆಗಾರಿಕೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಅಜಾದ್ ಅವರಿಗೆ ವಹಿಸಲಾಗಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಮೆರಿಕ ಪ್ರವಾಸದಲ್ಲಿರುವ ಕಾರಣ ಅಜಾದ್ ಅವರಿಗೆ ಹೊಣೆಗಾರಿಕೆ ವಹಿಸಲಾಗಿದೆ ಎನ್ನಲಾಗಿದೆ. ಸಂಪುಟ ವಿಸ್ತರಣೆಯ ನಿಟ್ಟಿನಲ್ಲಿ ಅಜಾದ್ ಅವರೇ ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ಇಂದು ಹೊಸದಿಲ್ಲಿಯಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುಲಾಂ ನಬಿ ಆಝಾದ್ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ್ದಾರೆ. ಹೊಸದಿಲ್ಲಿಯ ಅವೆನ್ಯೂ ರಸ್ತೆಯಲ್ಲಿರುವ ನಿವಾಸದಲ್ಲಿ ಅಝಾದ್ ಅವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿ ಚರ್ಚೆ ನಡೆಸಿದರು. ಈ ವೇಳೆ ಸಿಎಂ ಸಹೋದರ ಎಚ್.ಡಿ ರೇವಣ್ಣ ಅವರೂ ಜೊತೆಗಿದ್ದರು ಎಂದು ತಿಳಿದು ಬಂದಿದೆ. (ಎನ್.ಬಿ)

Leave a Reply

comments

Related Articles

error: