ಮೈಸೂರು

ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿಯೋರ್ವರು ಕೆಂದ್ರ ಕಾರಾಗೃಹದಲ್ಲಿಯೇ ಮೃತ ಪಟ್ಟ ಘಟನೆ ನಡೆದಿದೆ.

ಹಾಸನ ಮೂಲದ ಮರಿಸಿದ್ದಯ್ಯ(58)  ಎಂಬವರೇ ಮೃತ ಖೈದಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ಮರಿಸಿದ್ದಯ್ಯ ಕಳೆದ 8 ವರ್ಷಗಳಿಂದ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಈ ವೇಳೆ ಎರಡು ಬಾರಿ ಹೃದಯಾಘಾತಕ್ಕೆ ಒಳಗಾಗಿದ್ದ ಮರಿಸಿದ್ದಯ್ಯ ಈ ಬಾರಿ ಮತ್ತೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.  ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮಂಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

comments

Related Articles

error: