ಮೈಸೂರು

ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಅರ್ಪಣೆ

ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಸೋಮವಾರ ರಾತ್ರಿ ಇಹಲೋಕ ತ್ಯಜಿಸಿದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಬುಧವಾರ ನಡೆದ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೇಲುಕೋಟೆಯ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ ಜಯಲಲಿತಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಜಯಲಲಿತಾ ದಿಟ್ಟ ಮಹಿಳೆಯಾಗಿದ್ದರು ಎಂದರಲ್ಲದೇ ಅವರು ನಡೆದು ಬಂದ ಹಾದಿಯನ್ನು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಕೆ. ರಘುರಾಂ, ಇತಿಹಾಸ ವಿಶ್ಲೇಷಕ ಸೆಲ್ವಪಿಳ್ಳೈ ಅಯ್ಯಂಗಾರ್, ಬ್ರಾಹ್ಮಣ ಮುಖಂಡರಾದ ನಂ. ಶ್ರೀಕಂಠಕುಮಾರ್, ಡಿ.ಟಿ. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: