ಮೈಸೂರು

ಮುಖ್ಯಮಂತ್ರಿ-ಲೋಕೋಪಯೋಗಿ ಸಚಿವರ ವಿರುದ್ಧ ಸೂಕ್ತ ತನಿಖೆಗೆ ಆಗ್ರಹ : ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಅವರ ವಿರುದ್ಧ,  ಆಪ್ತ ಅಧಿಕಾರಿಗಳಾದ ಜಯಚಂದ್ರ ಮತ್ತು ಚಿಕ್ಕರಾಯಪ್ಪ ವಿರುದ್ಧ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಯಿತು.

ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾ ಪ್ರತಿಭಟನೆ ನಡೆಸಿದ್ದು, ಮೈಸೂರಿನ ಗಾಂಧಿ ಚೌಕದಲ್ಲಿಯೂ ಬುಧವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಜನಸಾಮಾನ್ಯರು ಬ್ಯಾಂಕಿನಿಂದ ಒಂದು ವಾರಕ್ಕೆ ಕೇವಲ 24ಸಾವಿರ ರೂ. ತೆಗೆದುಕೊಳ್ಳಬಹುದಾದ ಸಮಯದಲ್ಲಿ 5.7ಕೋಟಿಯಷ್ಟು ಹೊಸ ನೋಟುಗಳು ಈ ಅಧಿಕಾರಿಗಳ ಬಳಿ ಬಂದಿದ್ದಾದರೂ ಹೇಗೆ ಎಂದು ಪ್ರಶ್ನಿಸಿದರಲ್ಲೇ ಈ ಕುರಿತು ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು.

ಭ್ರಷ್ಟ ಅಧಿಕಾರಿಗಳಿಗೆ ಸಿಂಹ ಸ್ವಪ್ನವಾಗಿದ್ದ ಲೋಕಾಯುಕ್ತ ಸಂಸ್ಥೆಗೆ ಕಾಂಗ್ರೆಸ್ ಸರ್ಕಾರ ಬೀಗ ಮುದ್ರೆ ಜಡಿದು ರಾಜ್ಯದ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಲು ಪರೋಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಮತ್ತು ಅವರ ಆಪ್ತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್, ಯುವ ಮೋರ್ಚಾ ನಗರ ಅಧ್ಯಕ್ಷ ಗೋಕುಲ್ ಗೋವರ್ಧನ್, ಪ್ರಧಾನ ಕಾರ್ಯದರ್ಶಿ ಸಂಪತ್ ಬಿ ಮತ್ತಿತರರು ಪಾಲ್ಗೊಂಡಿದ್ದರು.

 

 

Leave a Reply

comments

Related Articles

error: