ಕರ್ನಾಟಕಪ್ರಮುಖ ಸುದ್ದಿ

ಗೃಹ ಇಲಾಖೆಗೆ ಸಲಹೆಗಾರರ ಅಗತ್ಯವಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು (ಮೇ 31): ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳಿದ್ದಾರೆ, ಗೃಹ ಇಲಾಖೆಗೆ ಸಲಹೆಗಾರರ ಅವಶ್ಯಕತೆ ಇಲ್ಲವೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಹೇಳಿದ್ದಾರೆ.

ಗುರುವಾರ (ಇಂದು) ಬೆಳಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ರಾಜ್ಯ ಪೊಲೀಸ್ ಇಲಾಖೆಗೆ ಈಗ ಇರುವ ಉತ್ತಮ ಅಧಿಕಾರಿಗಳೇ ಸಾಕು. ಗೃಹ ಇಲಾಖೆಗೆ ಪ್ರತ್ಯೇಕ ಸಲಹೆಗಾರರನ್ನು ನೇಮಕ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಗೃಹ ಇಲಾಖೆಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದ ಕೆಂಪಯ್ಯ ಅವರಿಂದ ಸಾಕಷ್ಟು ವಿವಾದಗಳು ಸೃಷ್ಟಿಯಾಗಿದ್ದವು.  ಕೆಂಪಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ನೀಡುತ್ತಿದ್ದಾರೆ. ಗೃಹ ಇಲಾಖೆಯಲ್ಲಿ ಕೆಂಪಯ್ಯ ಆದೇಶಗಳೇ ನಡೆಯಬೇಕು ಎಂಬ ವಾತಾವರಣದಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುವಂತಾಗಿದೆ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಇದೇ ಕಾರಣದಿಂದ ಪೊಲೀಸ್ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಸಹಕಾರಿಯಾಗುವಂತೆ ಕುಮಾರಸ್ವಾಮಿ ಅವರು ಈ ಬಾರಿ ಯಾವುದೇ ಸಲಹೆಗಾರರನ್ನು ನೇಮಿಸಿಕೊಳ್ಳದಂತೆ ಸೂಚಿಸಿದ್ದಾರೆ ಎನ್ನಲಾಗಿದೆ. (ಎನ್.ಬಿ)

Leave a Reply

comments

Related Articles

error: