ಸುದ್ದಿ ಸಂಕ್ಷಿಪ್ತ

ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಮೈಸೂರು, ಜೂ.1:- ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಮೂಲ ನಿವಾಸಿ ಜೇನುಕುರುಬ ಜನಾಂಗದವರಿಗೆ ಮೈಸೂರು ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ, ದ್ವಿತೀಯ ಪಿ.ಯು.ಸಿ., ಪದವಿ ವ್ಯಾಸಂಗ ಮಾಡುತ್ತಿರುವ ಜೇನುಕುರುಬ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತದೆ. ಹಾಗೂ 10ನೇ ತರಗತಿ, ದ್ವಿತೀಯ ಪಿ.ಯು.ಸಿ., ಪದವಿ ವ್ಯಾಸಂಗ ಮಾಡಿ ನಿರುದ್ಯೋಗಿಯಾಗಿರುವ ಅಭ್ಯರ್ಥಿಗಳಿಗೆ ನಿರುದ್ಯೋಗ ಜೀವನ ಭತ್ಯೆಯನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮತ್ತು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮೈಸೂರು ಜಿಲ್ಲೆ, ಮೈಸೂರು ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ 31 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2411113 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: