ಸುದ್ದಿ ಸಂಕ್ಷಿಪ್ತ

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ

ಮೈಸೂರು, ಜೂ.1:- ಕಲೆ, ಸಾಂಸ್ಕೃತಿಕ, ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಯನ್ನು ಭಾರತ ಸರ್ಕಾರವು ನೀಡುತ್ತದೆ. ಭಾರತದಲ್ಲಿ ನೆಲೆಸಿರುವ ಮತ್ತು ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳು ಅರ್ಜಿ ಸಲ್ಲಿಸಬಹುದು.
ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿತಕ್ಕದ್ದು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿ.ಎಸ್-1, ಹೈಟೆನ್ಷನ್ ಲೈನ್ ರಸ್ತೆ, ಕೃಷ್ಣದೇವರಾಯ ಸರ್ಕಲ್, ವಿಜಯನಗರ, 2ನೇ ಹಂತ, ಮೈಸೂರು ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0821-2498031/2495432 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: