
ಪ್ರಮುಖ ಸುದ್ದಿ
ಜೂನ್ 4 ಅಥವಾ 5 ರಂದು ರಾಜ್ಯಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ : ಸಿಎಂ ಹೆಚ್.ಡಿ ಕುಮಾರಸ್ವಾಮಿ
ರಾಜ್ಯ(ದೇಶ)ಜೂ.1:- ರಾಜ್ಯ ಸಚಿವ ಸಂಪುಟವನ್ನು ಜೂನ್ 4 ಅಥವಾ 5 ರಂದು ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಸಚಿವ ಸಂಪುಟ ರಚನೆ ವಿಚಾರ ಕುರಿತು ಇಂದು ರಾಜ್ಯಪಾಲರ ಭೇಟಿಗೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯಪಾಲರ ಭೇಟಿಗೆ ನಾನು ಮತ್ತು ಡಿಸಿಎಂ ಪರಮೇಶ್ವರ್ ಬಂದಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಂತರ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ನಿಗದಿ ಪಡಿಸುತ್ತೇವೆ ಎಂದಿದ್ದಾರೆ.
ರಾಜ್ಯಪಾಲರು ಪೂರ್ವನಿಗದಿತ ಕಾರ್ಯಕ್ರಮ ಹಿನ್ನೆಲೆ ದೆಹಲಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆ ಅವರು ಬಂದ ಮೇಲೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಮೇ 4 ಅಥವಾ 5ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿಯಾಗುವ ಸಾಧ್ಯತೆ ಇದೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಬಳಿಕ ರಾಜಭವನಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಭೇಟಿ ನೀಡಿದ್ದಾರೆ.(ಕೆ.ಎಸ್,ಎಸ್.ಎಚ್)