ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು,ಜೂ.1:-ಹೆಚ್.ಡಿ.ಕೋಟೆ ಟೌನ್‍ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ/ಬಾಲಕರ ವಿದ್ಯಾರ್ಥಿನಿಲಯ ಹಾಗೂ ಡಿ. ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕರ/ಬಾಲಕಿಯರ ಪ್ರವೇಶಕ್ಕಾಗಿ ಸರ್ಕಾರಿ/ ಅರೆಸರ್ಕಾರಿ/ಪದವಿ ಪೂರ್ವ, ಪದವಿ, ಐಟಿಐ ಮತ್ತು ಡಿಇಡಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.  ಪ್ರವರ್ಗ-1, ಎಸ್.ಸಿ./ಎಸ್.ಟಿ.  ವಿದ್ಯಾರ್ಥಿನಿಯರ ಕುಟುಂಬದ ವಾರ್ಷಿಕ ಆದಾಯ ಮಿತಿ 2.50 ಲಕ್ಷ, ಪ್ರವರ್ಗ 2ಎ, 3ಎ ಹಾಗೂ 3ಬಿಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 1.00 ಲಕ್ಷ ದೊಳಗೆ ಇರಬೇಕು.
ಆನ್‍ಲೈನ್ http://karepass.cgg.gov.in/ ಮೂಲಕ ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ www.backwardclasses.kar.nic.inಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08228-255156, ಮೊಬೈಲ್ ಸಂಖ್ಯೆ 9742249826 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: