ಮೈಸೂರು

ಡಿ.10 : ರೂವಾರಿ ಅಭಿನಂದನಾ ಗ್ರಂಥ ಲೋಕಾರ್ಪಣೆ

ಎಸ್. ಜಿತೇಂದ್ರ ಕುಮಾರ್ ಅವರ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯನ್ನು ಸ್ಮರಿಸುವ ಸಲುವಾಗಿ ಅಭಿನಂದನಾ ಸಮಾರಂಭ ಹಾಗೂ ‘ರೂವಾರಿ’ ಅಭಿನಂದನಾ ಗ್ರಂಥದ ಲೋಕಾರ್ಪಣೆಯನ್ನು ಡಿ.10 ರಂದು ಬೆಳಿಗ್ಗೆ 11 ಗಂಟೆಗೆ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್. ಜಿತೇಂದ್ರ ಕುಮಾರ್ ಅಭಿನಂದನಾ ಸಮಿತಿಯ ಅಧ್ಯಕ್ಷ ರಾಜೇಂದ್ರ ಕುಮಾರ್ ಹೇಳಿದರು.

ಮೈಸೂರಿನ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018 ರಲ್ಲಿ ನಡೆಯಲಿರುವ ಶ್ರವಣಬೆಳಗೊಳ ಭಗವಾನ್ ಶ್ರೀ ಬಾಹುಬಲಿ ಗೊಮ್ಮಟೇಶ್ವರ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ ರಾಷ್ಡ್ರೀಯ ಕಾರ್ಯಾ‍ಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಜಿತೇಂದ್ರ ಕುಮಾರ್ ಅವರನ್ನು ಅಭಿನಂದಿಸಲಾಗುತ್ತದೆ ಎಂದು ಹೇಳಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ದಿವ್ಯ ಉಪಸ್ಥಿತಿಯಲ್ಲಿ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ದೇವೇಂದ್ರಸ್ವಾಮಿ, ಸುನೀಲ್, ಶೀಲಾ ಅನಂತರಾಜು, ಪ್ರಭಾಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: