ಮೈಸೂರು

ಡಿ.9 : ವಿವಿಧ ಕಾರ್ಯಕ್ರಮ

ಮೈಸೂರು ಸಮಾನಮನಸ್ಕ ಒಕ್ಕಲಿಗ ಸಂಘಟನೆಗಳ ಬಳಗ ಮತ್ತು ವಸತಿ ಸಚಿವ ಎಂ.ಕೃಷ್ಣಪ್ಪ ಅಭಿಮಾನಿಗಳ ಬಳಗದ ಜಂಟಿ ಆಶ್ರಯದಲ್ಲಿ ಡಿ.9 ರಂದು ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನೇಗಿಲಯೋಗಿ ಸಮಾಜಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ಕೆ.ಎನ್. ಚಂದ್ರಶೇಖರ್ ಹೇಳಿದರು.

ಮೈಸೂರಿನ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸ ಮತ್ತು ಉದ್ಯೋಗದ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ಉಪನ್ಯಾಸ, ಸಂಜೆ 5.30 ಕ್ಕೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಅಭಿನಂದನೆ ಹಾಗೂ ವಸತಿ ಸಚಿವ ಎಂ.ಕೃಷ್ಣಪ್ಪ ಅವರಿಗೆ ಶುಭಹಾರೈಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದು, ಮೈಸೂರು ವಿವಿಯ ಕುಲಪತಿ ಅಧ‍್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ವಾಸು, ಸಾ.ರಾ.ಮಹೇಶ್ ಇನ್ನಿತರರು ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ 8277520042 / 81471177058 ಗೆ ಸಂಪರ್ಕಿಸಬಹುದಾಗಿದೆ.

ಸುದ್ದಿಗೋಷ್ಠಿಯಲ್ಲಿ ಒಕ್ಕಲಿಗರ ಸಂಘದ ಶಿವಕುಮಾರ್, ಕೆ.ಮಹದೇವನ್, ರಾಮು ಕೆ.ಪಿ. ಡಾ.ಬಾಲಕೃಷ್ಣ ಉಪಸ್ಥಿತರಿದ್ದರು.

Leave a Reply

comments

Related Articles

error: