ಸುದ್ದಿ ಸಂಕ್ಷಿಪ್ತ

ಶೇ. 90ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ

ರಾಜ್ಯ(ಮಡಿಕೇರಿ)ಜೂ.2;-  ಅಖಿಲ ಭಾರತ ವೀರಶೈವ ಮಹಾ ಸಭಾದ ವತಿಯಿಂದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ, ಪ್ರೋತ್ಸಾಹಿಸಿ ಪುರಸ್ಕರಿಸಲಾಗುವುದು ಎಂದು ಮಹಾ ಸಭಾದ ಕೊಡಗು ಜಿಲ್ಲಾ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳು ಸ್ವ ವಿವರಗಳೊಂದಿಗೆ ಇತ್ತೀಚಿನ ಭಾವಚಿತ್ರ, ಧೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಜೂನ್ 20ರ ಒಳಗಾಗಿ ಅಖಿಲಭಾರತ ವೀರಶೈವ ಮಹಾಸಭಾ, ನಂ 17/4, ವೀರಶೈವ ಲಿಂಗಾಯತ ಭವನ, ಸದಾಶಿವ ನಗರ, ಬೆಂಗಳೂರು-560080 ಈ ವಿಳಾಸಕ್ಕೆ ಕಳುಹಿಸಬಹುದು. ಅಥವಾ ಮಹಾಸಭಾದ ವೆಬ್‍ಸೈಟ್‍ನಲ್ಲಿ ಅನ್‍ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: