ಮೈಸೂರು

ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಮೈಸೂರು,ಜೂ.4;- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆಗೈದು, ಪುಷ್ಪನಮನ ಸಲ್ಲಿಸುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್  ಅವರಿಂದು ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಗೈದು ಗೌರವ ಸಮರ್ಪಿಸಿದರು. ಈ ಸಂದರ್ಭ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದೇ ವೇಳೆ ಅರಸು ಮಂಡಳಿ ಸಂಘದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಲಾಯಿತು. ವಿಶೇಷ ಮೆರವಣಿಗೆಯನ್ನೂ ನಡೆಸಲಾಯಿತು. ತ್ಯಾಗರಾಜ ರಸ್ತೆಯಲ್ಲಿರುವ ಸಂಘದ ಆವರಣದಲ್ಲಿ ನಾಲ್ವಡಿಯವರ ಪುತ್ಥಳಿಗೆ ಪುಷ್ಪಾರ್ಚನೆಗೈದು ಗೌರವ ಅರ್ಪಿಸಲಾಯಿತು. ಇದೇ ವೇಳೆ ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳನ್ನು ಗಣ್ಯರು ಸ್ಮರಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: