ಮೈಸೂರು

ಮರಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಉಳಿಸಿ : ರಾಜವಂಶಸ್ಥ ಯದುವೀರ್

ಮೈಸೂರು,ಜೂ.5:- ಇಂದು ವಿಶ್ವ ಪರಿಸರ ದಿನಾಚರಣೆ ಹಿನ್ನಲೆಯಲ್ಲಿ ಕನಸು ಫೌಂಡೇಶನ್ ವತಿಯಿಂದ ಸಸಿ ವಿತರಿಸಲಾಯಿತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ  ನಡೆದ ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣರಾಜ ಒಡೆಯರ್ ಪಾಲ್ಗೊಂಡು ದೇವಾಲಯಕ್ಕೆ ಬರುವ ಸಾರ್ವಜನಿಕರಿಗೆ ಸಸಿ ವಿತರಣೆ ಮಾಡಿದರು. ಸಸಿ ನೀಡಿ  ಸಾರ್ವಜನಿಕರಿಗೆ ಪರಿಸರದ‌ ಕುರಿತು ಅರಿವು ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಮೈಸೂರು ಮಹಾರಾಜರು ಮರಗಿಡಗಳನ್ನು ನೆಟ್ಟು ಪರಿಸರವನ್ನು ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇಂದು ನಾವು ಕೂಡ ಅವರು ಹಾಕಿಕೊಟ್ಟ ಮಾರ್ಗದಲ್ಲೇ ಸಾಗಬೇಕಿದೆ.  ಮರಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಉಳಿಸಬೇಕು ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: