ಮೈಸೂರು

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ

ಮೈಸೂರು,ಜೂ.5:- ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದೆ.

ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಸಂಘಟನೆಯ ಮುಖಂಡರು ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಕಳೆದ ನಾಲ್ಕುವರ್ಷಗಳಿಂದ ಸತತ ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಿಂದಿನ ಸರ್ಕಾರದ ನಿರ್ಧಾರ ಸಂತಸ ತಂದಿತ್ತು. ಆದರೆ ಈಗ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿಲ್ಲ ಎನ್ನಲಾಗುತ್ತಿದೆ. ನೂರಾರು ರೂಪಾಯಿ ತೆತ್ತು ಪ್ರತಿದಿನ ತರಗತಿಗೆ ಹಾಜರಾಗಬೇಕಾದ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಉಚಿತ ಬಸ್ ಪಾಸ್ ನೀಡುವ ನಿರ್ಧಾರವನ್ನು ತುರ್ತಾಗಿ ಜಾರಿಗೊಳಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂವಾಗುವಂತಹ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಎಐಡಿಎಸ್ಒ ಕಾರ್ಯದರ್ಶಿ ಚಂದ್ರಕಲಾ, ಎಐಡಿವೈಓ ಕಾರ್ಯದರ್ಶಿ ಸುನಿಲ್ ಟಿ.ಆರ್.ಎಐಎಂಎಸ್ ಎಸ್ ಉಪಾಧ್ಯಕ್ಷ ಸೀಮಾ ಜಿ.ಎಸ್, ಬಸವರಾಜು, ಹೆಚ್.ಎಂ.ಆಸಿಯಾ ಬೇಗಂ, ಆಕಾಶ್ ಕುಮಾರ್, ಸುಮ, ರಂಜಿತಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: