ಕರ್ನಾಟಕ

ನೀರಿನ ಸಂಪಿನೊಳಗೆ ವ್ಯಕ್ತಿಯ ಶವ ಪತ್ತೆ

ಬೆಂಗಳೂರು,ಜೂ.05: ಕೊಳೆತು ನಾರುತಿದ್ದು, ವಾಸನೆ ಮೇರೆಗೆ ನೀರಿನ ಸಂಪ್ ನೊಳಗೆ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ವಾಜರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಆಂಧ್ರ ಪ್ರದೇಶದ ಕಲ್ಯಾಣದುರ್ಗ ಮೂಲದ ಈರಲಿಂಗಪ್ಪ ಕೊಲೆಯಾದ ದುರ್ದೈವಿ. ಈರಲಿಂಗಪ್ಪನ ಪತ್ನಿ ಈಶ್ವರಮ್ಮನ್ನೇ ಮೂರು-ನಾಲ್ಕು ದಿನದಿಂದ ನಾಪತ್ತೆಯಾಗಿದ್ದು, ಪೊಲೀಸರು ಈರಲಿಂಗಪ್ಪನ ಪತ್ನಿಯೇ ಕೊಲೆ ಮಾಡಿದ್ದಾರೆ ಎಂದು ಶಂಕಿಸಿದ್ದಾರೆ. ಸದ್ಯ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತಿದ್ದಾರೆ. (ಪಿ.ಎಸ್ )

Leave a Reply

comments

Related Articles

error: