ಪ್ರಮುಖ ಸುದ್ದಿ

ತಾಯಿ ಚಾಮುಂಡೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ಜಿ.ಟಿ ದೇವೇಗೌಡ

ರಾಜ್ಯ(ಬೆಂಗಳೂರು)ಜೂ.6:- ಮೈತ್ರಿ ಸರ್ಕಾರದ ನೂತನ ಸಚಿವರಾಗಿ ದೇವರ ಹೆಸರಿನಲ್ಲಿ ಕಾಂಗ್ರೆಸ್ ನ ಡಿ.ಕೆ ಶಿವಕುಮಾರ್, ಕೆ.ಜೆ ಜಾರ್ಜ್,  ಜೆಡಿಎಸ್ ನ ಬಂಡಪ್ಪ ಕಾಶಂಪುರ ಪ್ರಮಾಣ ವಚನ ಸ್ವೀಕರಿಸಿದ್ದು,  ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಾಯಿ ಚಾಮುಂಡೇಶ್ವರಿ ಹೆಸರಿನಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಸಂಪುಟ ದರ್ಜೆ ಸಚಿವರಾಗಿ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ಜೆಡಿಎಸ್ ನ ಡಿಸಿ ತಮ್ಮಣ್ಣ, ಎಂ.ಸಿ ಮನಗೊಳಿ ಪ್ರಮಾಣ ವಚನ ಸ್ವೀಕರಿಸಿದ್ದು,  ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕಡೆ ಗಳಿಗೆಯಲ್ಲಿ ಸಚಿವ ಸ್ಥಾನ ಪಡೆದ  ಡಿಸಿ ತಮ್ಮಣ್ಣ ಹಾಗೂ  ಎಂ.ಸಿ ಮನಗೊಳಿ ಇಬ್ಬರಿಗೂ ಸಚಿವ ಸ್ಥಾನ ಕೈ ತಪ್ಪಿದೆ ಎಂಬ ಸುದ್ದಿ ಹರಡಿತ್ತು. ಆದರೆ ಇಬ್ಬರೂ ಪ್ರಮಾನ ವಚನ ಸ್ವೀಕರಿಸಿದ್ದಾರೆ. ರಮೇಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ,ಯುಟಿ ಖಾದರ್ , ವೆಂಕಟರಾವ್ ನಾಡಗೌಡ,  ಎಸ್. ಆರ್ ಶ್ರೀನಿವಾಸ್ ಪ್ರಮಾಣ ವಚನ ಸ್ವೀರಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: