ಮೈಸೂರು

ವಾಹನ ಪಲ್ಟಿ: ಇಬ್ಬರು ಸಾವು

accident-1ನಂಜನಗೂಡಿನ ಕಳಲೆ ಗೇಟ್ ಬಳಿ ಪಿಕ್ ಅಪ್ ವಾಹನವೊಂದು ಹಳ್ಳಕ್ಕೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಗುರುವಾರದಂದು ಗುಂಡ್ಲುಪೇಟೆ ಕಡೆಯಿಂದ ನಂಜನಗೂಡು ಕಡೆಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.

ವಾಹನದಲ್ಲಿ ರಸ್ತೆ ಕಾಮಗಾರಿ ಕೆಲಸಗಾರರಿದ್ದು, ನಾಲ್ವರಿಗೆ ಗಾಯಗಳಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಇವರೆಲ್ಲ ಮಧ್ಯಪ್ರದೇಶದ ಇಂದೋರ್ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

comments

Related Articles

error: