ಮೈಸೂರು

ಪಿ.ಡಬ್ಲ್ಯೂ.ಡಿ ಕ್ವಾರ್ಟರ್ಸ್ ನಲ್ಲಿ ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ಆಭರಣ ಕಳುವು

ಮೈಸೂರು ರಸ್ತೆಯ ಕೆ.ಆರ್.ನಗರ ಪಟ್ಟಣದಲ್ಲಿರುವ ಪಿ.ಡಬ್ಲ್ಯೂ.ಡಿ ಕ್ವಾರ್ಟರ್ಸ್ ನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಪಿ.ಡಬ್ಲ್ಯೂ.ಡಿಯಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದ ನರಸಿಂಹೇಗೌಡ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಅವರು ಗುರುವಾರ ಮೈಸೂರಿಗೆ ಕೆಲಸದ ನಿಮಿತ್ತ ಆಗಮಿಸಿದ್ದರು. ಮನೆಯಲ್ಲಿ ಅವರ 9ವರ್ಷದ ಮಗುವನ್ನು ಬಿಟ್ಟು ಬಂದಿದ್ದರು ಎನ್ನಲಾಗಿದೆ. ಮನೆಯಲ್ಲಿ ಹಿರಿಯರು ಯಾರೂ ಇಲ್ಲದ ವೇಳೆ ಮನೆಯ ಮುಂಬಾಗಿಲನ್ನು ಮೀಟಿ ಒಳನುಗ್ಗಿದ ಕಳ್ಳರು ಮಗುವಿನ ಬಾಯಿಗೆ ಬಟ್ಟೆ ತುರುಕಿ, ಕೈಕಾಲುಗಳನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.

ಶುಕ್ರವಾರ ಬೆಳಿಗ್ಗೆ ನರಸಿಂಹೇಗೌಡ ಮನೆಗೆ ವಾಪಸ್ಸಾದಾಗ ಕೃತ್ಯ ಬೆಳಕಿಗೆ ಬಂದಿದೆ. ಕೆ.ಆರ್.ನಗರ ಠಾಣೆಯ ಸಬ್ ಇನ್ಸಪೆಕ್ಟರ್ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

comments

Related Articles

error: