
ಮೈಸೂರು
ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪ್ರತಿಭಟನೆ
ಹಾರಂಗಿ ಜಲಾಶಯದಿಂದ ನಾಲೆಗಳ ಮುಖಾಂತರ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕೆ.ಆರ್.ನಗರ ತಾಲೂಕಿನಲ್ಲಿ 20 ಹೆಕ್ಟೇರ್ ಪ್ರದೇಶದಲ್ಲಿ ಬತ್ತದ ಬೆಳೆ ಬೆಳೆಯಲಾಗಿದೆ. ಹಾರಂಗಿಯಲ್ಲಿ ಕುಡಿಯುವ ನೀರಿಗೆ 1.5 ಟಿಎಂಸಿ ನೀರು ಉಳಿಸಿಕೊಂಡು ನಾಲ್ಕು ಸಾವಿರ ಕ್ಯೂಸೆಕ್ ನೀರು ಬಿಡಲು ಅವಕಾಶವಿದೆ. ತಕ್ಷಣ ನೀರು ಬಿಟ್ಟರೆ ಫಸಲು ಉಳಿದುಕೊಳ್ಳುತ್ತದೆ. ನಾಲೆಗಳ ಮುಖಾಂತರ ಪ್ರತಿದಿನಕ್ಕೆ 100 ಕ್ಯೂಸೆಕ್ಸ್ನಂತೆ ಐದು ದಿನಗಳ ಕಾಲ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಇಲ್ಲವಾದಲ್ಲಿ ನಷ್ಟಕ್ಕೆ ಒಳಗಾಗಿರುವ ಬೆಳೆಗಳಿಗೆ ಪ್ರತಿ ಎಕರೆಗೆ 25,000 ರೂ.ಗಳಂತೆ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.