
ಮೈಸೂರು
ಬಸ್ಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸಾವು
ಕೆ.ಆರ್.ನಗರ –ಹುಣಸೂರು ಮುಖ್ಯರಸ್ತೆಯಲ್ಲಿರುವ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಶುಕ್ರವಾರ ಮುಂಜಾನೆ 5ರ ಸುಮಾರಿಗೆ ಅಪಘಾತ ನಡೆದಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಡಿಕೇರಿ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಇನೋವಾ ಮಧ್ಯೆ ಸಣ್ಣ ಅಪಘಾತ ಸಂಭವಿಸಿದ್ದು, ಬಸ್-ಕಾರು ಚಾಲಕರಿಬ್ಬರ ವಾಹನಗಳನ್ನು ರಸ್ತೆ ಮಧ್ಯದಲ್ಲೇ ನಿಲ್ಲಿಸಿ ವಾಗ್ವಾದದಲ್ಲಿ ತೊಡಗಿದ್ದರು. ಈ ವೇಳೆ ಮಡಿಕೇರಿ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಅಲ್ಟೋ ಕಾರು ಮಾರ್ಗ ಮಧ್ಯದಲ್ಲಿ ನಿಂತಿರುವ ಬಸ್ಗೆ ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಗೀತಾ(52) ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಮಗ ಪೂಜಿತ್(30) ಮತ್ತು ಸೊಸೆ ಗಾನವಿ(29) ಇಬ್ಬರಿಗೆ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾರೋಗ್ಯಕ್ಕಿಡಾಗಿದ್ದ ಗೀತಾ ಅವರನ್ನು ಮಡಿಕೇರಿಯಿಂದ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.