
ಪ್ರಮುಖ ಸುದ್ದಿ
ಎಲ್ಲಾ ಶಾಲೆಗಳಲ್ಲಿ ಸ್ಕೌಟ್ ಗೈಡ್ಸ್ ಗೆ ಉತ್ತೇಜನ ನೀಡಿ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ರಾಜ್ಯ(ಬೆಂಗಳೂರು)ಜೂ.8:- ಎಲ್ಲಾ ಸರ್ಕಾರಿ ಶಾಲೆ ಮತ್ತು ಪ್ರೌಢಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯ ಅವರ ನೇತೃತ್ವದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಯೋಗದ ಜೊತೆ ಮಾತನಾಡಿದ ನಂತರ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ಪದವಿ ಪೂರ್ವ ಮತ್ತು ಪದವಿ ಶಿಕ್ಷಣದಲ್ಲಿ ಕೂಡ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ನೀಡಲು ಶಿಕ್ಷಕರನ್ನು ತರಬೇತಿಗೊಳಿಸಬೇಕಾಗಿದೆ. ಇದಕ್ಕೆ ಬೇಕಾದ ಸಹಕಾರವನ್ನು ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)