ಮೈಸೂರು

ಸತೀಶ್ ಜಾರಕಿಹೊಳಿ ಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜೂ.8:- ಸತೀಶ್ ಜಾರಕಿಹೊಳಿ ಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ‌ ವೇದಿಕೆ & ದಲಿತ ಸಂಘಟನೆಗಳ ಒಕ್ಕೂಟಗಳ ವತಿಯಿಂದ ಪ್ರತಿಭಟನೆ ನಡೆಯಿತು.

ಪುರಭವನದ ಆವರಣದಲ್ಲಿರುವ. ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ರಾಜ್ಯ ಸಮ್ಮಿಶ್ರ ಸರ್ಕಾರವು ಸತೀಸ್ ಜಾರಕಿ ಹೊಳಿಯವರಿಗೆ ಸಚಿವ ಸ್ಥಾನ ನೀಡದೆ ದಲಿತರನ್ನು ಅವಮಾನಿಸುತ್ತಿದೆ ಎಂದರಲ್ಲದೇ,ಕಾಂಗ್ರೆಸ್‌ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಕೂಡಲೇ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ಸಚಿವ ಸ್ಥಾನ ನೀಡದಿದ್ದಲ್ಲಿ  ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದರು.

ಪ್ರತಿಭಟನೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳ ಸಂಘದ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: