
ಮೈಸೂರು
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಮತದಾನ : ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ನಿಂತಿದ್ದಕ್ಕೆ ಆಕ್ಷೇಪ
ಮೈಸೂರು,ಜೂ.8:- ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಮತದಾನ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ತಮ್ಮ ಹಕ್ಕು ಚಲಾಯಿಸಿದ್ದು, ಮತದಾನಕ್ಕೂ ಮುನ್ನ ಕೈ ಅಭ್ಯರ್ಥಿ ಲಕ್ಷ್ಮಣ್ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ನಿಂತಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮೈಸೂರಿನ ಗೋಕುಲಂನ ಮತಗಟ್ಟೆ ಮುಂಭಾಗ ಘಟನೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಒತ್ತಾಯಕ್ಕೆ ಮಣಿದ ಪೊಲೀಸರು ಕಾರ್ಯಕರ್ತರನ್ನು ದೂರ ಕಳುಹಿಸಿದ್ದಾರೆ. (ಕೆ.ಎಸ್,ಎಸ್.ಎಚ್)