Uncategorized

ಕೊಡಗಿನಲ್ಲಿ ಉತ್ತಮ ಮಳೆ : ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ

ರಾಜ್ಯ(ಮಡಿಕೇರಿ) ಜೂ.8 :- ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾಗಮಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಗುರುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ರಾತ್ರಿ ಎಡೆಬಿಡದೆ ಮಳೆಯಾಗಿದೆ. ಕಾವೇರಿ ನದಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ತ್ರಿವೇಣಿ ಸಂಗಮದ ನೀರು ರಸ್ತೆ ಬಳಿ ಬಂದಿದೆ. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲೂ ಉತ್ತಮ ಮಳೆಯಾಗುತ್ತಿದೆ.

ಮಡಿಕೇರಿಯಲ್ಲಿ ಮಳೆ ಸಹಿತ ಚಳಿ ಇದೆ. ನಗರದ ರಸ್ತೆ ಗುಂಡಿಗಳಲ್ಲಿ ನೀರು ನಿಂತಿದ್ದು, ಕೋಟೆ ಆವರಣ ತುಂಬಾ ನೀರು ಆವರಿಸಿದೆ. ಶ್ರೀಓಂಕಾರೇಶ್ವರ ದೇವಾಲಯದ ಕೆರೆ ಭರ್ತಿಯ ಹಂತದಲ್ಲಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ಕಣಿವೆಯ ಜನತೆಯಲ್ಲಿ ಹರ್ಷ ತಂದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 64.40 ಮಿ.ಮೀ. ಕಳೆದ ವರ್ಷ ಇದೇ ದಿನ 1.32 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 516.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 338.45 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 108.80 ಮಿ.ಮೀ. ಕಳೆದ ವರ್ಷ ಇದೇ ದಿನ 2.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 762.69 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 409.47 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 46.92 ಮಿ.ಮೀ. ಕಳೆದ ವರ್ಷ ಇದೇ ದಿನ 1.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 380.62 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 327.24 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 37.48 ಮಿ.ಮೀ. ಕಳೆದ ವರ್ಷ ಇದೇ ದಿನ 0.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 404.91 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 278.64 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 101.20, ನಾಪೋಕ್ಲು 85.20, ಸಂಪಾಜೆ 105.20, ಭಾಗಮಂಡಲ 143.60, ವಿರಾಜಪೇಟೆ ಕಸಬಾ 68.60, ಹುದಿಕೇರಿ 48, ಶ್ರೀಮಂಗಲ 42.80, ಪೊನ್ನಂಪೇಟೆ 48.60, ಅಮ್ಮತಿ 40.53, ಬಾಳಲೆ 33, ಸೋಮವಾರಪೇಟೆ ಕಸಬಾ 34.60, ಶನಿವಾರಸಂತೆ 24.30, ಶಾಂತಳ್ಳಿ 54.60,  ಕೊಡ್ಲಿಪೇಟೆ 35.40, ಕುಶಾಲನಗರ 25, ಸುಂಟಿಕೊಪ್ಪ 51 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (08-06-18) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2788.18 ಅಡಿಗಳು, ಕಳೆದ ವರ್ಷ ಇದೇ ದಿನ 2807.52 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 28.60 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ., ಇಂದಿನ ನೀರಿನ ಒಳ ಹರಿವು 295 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 140 ಕ್ಯುಸೆಕ್.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: