ಕರ್ನಾಟಕ

ಡಿಕೆಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಒತ್ತಾಯ

ರಾಜ್ಯ(ಚಿಕ್ಕಮಗಳೂರು)ಜೂ.9:- ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾನ ಮನಸ್ಕರ ಸಭೆ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್‍ನ್ನು ಒತ್ತಾಯಿಸುವ ನಿರ್ಣಯ ಕೈಗೊಂಡಿತು.

ಸಭೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದಲ್ಲಿ ಕಾಂಗ್ರೆಸ್‍ನ ಬಲವರ್ಧನೆಗೆ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವುದು ಅತ್ಯಗತ್ಯ ಎಂದರು. ಡಿ.ಕೆ.ಶಿವಕುಮಾರ್ ಅವರು ಗಟ್ಟಿತನವಿರುವ ನಾಯಕ ಅವರು ಪಕ್ಷಕ್ಕಾಗಿ ಮತ್ತು ಕಾರ್ಯಕರ್ತರ ಹಿತರಕ್ಷಣೆಗಾಗಿ ಸದಾ ದುಡಿಯುತ್ತಿದ್ದು, ಅಂತಹ ವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು ಅವರ ಪರ ಎಲ್ಲರೂ ಹೋರಾಟ ನಡೆಸಬೇಕು ಎಂದು ತಿಳಿಸಿದರು. ಪಕ್ಷ ಸಂಕಷ್ಟಕ್ಕೀಡಾದ ಎಲ್ಲಾ ಸಂದರ್ಭಗಳಲ್ಲೂ ಮುನ್ನುಗ್ಗಿ ರಕ್ಷಿಸುವ ಡಿ.ಕೆ.ಶಿವಕುಮಾರ್ ಅವರನ್ನು ಮೂಲೆಗುಂಪಾಗಿಸುತ್ತಿರುವುದು ಮತ್ತು ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಜೆಡಿಎಸ್‍ಗೆ ನೀಡಿರುವ ಕುರಿತು ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಕೆಪಿಸಿಸಿ ಉಪಾಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಸಾರಥ್ಯ ವಹಿಸಿದಲ್ಲಿ ರಾಜ್ಯದಲ್ಲಿ ಪಕ್ಷ ಬೆಳೆದು ಸಧೃಡವಾಗಲು ಸಾಧ್ಯವಾಗುತ್ತದೆ ಎಂದರು. ಪಕ್ಷವನ್ನು ಕಟ್ಟಿ ಬೆಳೆಸುವ ಅದನ್ನು ಸದಾಕಾಲ ರಕ್ಷಿಸುವ ನಾಯಕರ ಪರ ಎಲ್ಲರೂ ನಿಲ್ಲಬೇಕು ಎಂದು ಹೇಳಿದರು.

ಜಿಲ್ಲಾ ಉಪಾಧ್ಯಕ್ಷ ಗಂಗಾಧರ್‍ಗೌಡ ,  ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮಹಮದ್  ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: