ಮೈಸೂರು

ಮಾದಿಗ ಜನಾಂಗಕ್ಕೆ ಮೀಸಲಾತಿ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ದೊರಕಬೇಕೆಂಬ ಆಶಯದಿಂದ ಕಾಂಗ್ರೆಸ್ ಸರ್ಕಾರ, ಸರ್ಕಾರದ ಹಣವನ್ನು ವೆಚ್ಚ ಮಾಡಿ ನಿವೃತ್ತ ನ್ಯಾಯಮೂರ್ತಿಗಳಾದ ಎ.ಜೆ. ಸದಾಶಿವ ಅವರಿಂದ ವರದಿ ಸ್ವೀಕರಿಸಿ ವರ್ಷಗಳೇ ಕಳೆದಿವೆ. ಆದರೂ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸದೇ ಮಾದಿಗ ಜನಾಂಗಕ್ಕೆ ಅನ್ಯಾಯವೆಸಗಿದೆ ಎಂದು ಆರೋಪಿಸಿ ಆದಿಜಾಂಬವ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಯಿತು.

ಹುಣಸೂರಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಟ್ರಸ್ಟ್ ನ ಅಧ್ಯಕ್ಷ ಸೋಮಶೇಖರ್ ಮಾತನಾಡಿ, ಮಾದಿಗ ಜನಾಂಗದ ಮೇಲೆ ಮುಖ್ಯಮಂತ್ರಿಗಳು ಪ್ರೀತಿ, ವಿಶ್ವಾಸವಿಟ್ಟಿದ್ದೇನೆ ಎಂದಿದ್ದಾರೆ. ಅಲ್ಲದೇ ಮಾದಿಗ ಸಮಾಜಕ್ಕೆ ಹಾಗೂ ತುಳಿತಕ್ಕೆ ಒಳಗಾದ ಸಮಾಜಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುತ್ತೇನೆಂದು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳು ನ್ಯಾಯಯುತವಾದ ನಮ್ಮ ಬೇಡಿಕೆಯನ್ನು ಈಡೇರಿಸಿ, ಕಡ್ಡಾಯವಾಗಿ ಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿದರು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಟ್ರಸ್ಟ್ ನ ಸದಸ್ಯರಾದ ಸುರೇಶ್, ವೆಂಕಟೇಶ್, ರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: