ಮೈಸೂರು

ರಾಜಕಾರಣಿಗಳು ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸಬೇಕು: ಸಚಿವ ಕೃಷ್ಣಪ್ಪ

ರಾಜಕಾರಣಿಗಳು ನಿಸ್ವಾರ್ಥ ಭಾವನೆಯಿಂದ ಕಾರ್ಯ ಮಾಡಿದರೆ ಮಾತ್ರ ಪ್ರಾಮಾಣಿಕ ಸೇವೆ ಸಲ್ಲಿಸಲು ಸಾಧ್ಯ ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ಹೇಳಿದರು.

ಮೈಸೂರು ಸಮಾನ ಮನಸ್ಕ ಒಕ್ಕಲಿಗ ಬಳಗ ಮತ್ತು ವಸತಿ ಸಚಿವ ಎಂ.ಕೃಷ್ಣಪ್ಪ ರವರ ಅಭಿಮಾನಿಗಳ ಬಳಗದ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಮತ್ತು ಉದ್ಯೋಗಾಂಕ್ಷಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಅಭಿನಂದನೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಎಂ.ಕೃಷ್ಣಪ್ಪ ಮಾತನಾಡಿದರು.

ರಾಜಕಾರಣಿಗಳು ತಮ್ಮನ್ನು ಭಿಕ್ಷುಕರಲ್ಲಿ ಭಿಕ್ಷುಕರು ಎಂದು ತಿಳಿದು ನಿಸ್ವಾರ್ಥ ಸೇವೆ ಮಾಡಬೇಕು. ಹಿಂದಿನ ರಾಜಕಾರಣಿಗಳು ವಿರೋಧ ಪಕ್ಷಗಳ ಹೇಳಿಕೆಗಳನ್ನು ತಾಳ್ಮೆಯಿಂದ ಆಲಿಸಿ, ಸಮಸ್ಯೆಗಳು ಕಂಡು ಬಂದರೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದರು ಎಂದರು.

ಚಾಮರಾಜ ಕ್ಷೇತ್ರದ ಶಾಸಕ ವಾಸು ಮಾತನಾಡಿ,  ಹಿಂದೆ ಕಂಡ ಮೌಲ್ಯಾಧಾರಿತ ರಾಜಕಾರಣಿಗಳ ಬಗ್ಗೆ ಇಂದಿನ ಯುವಕರಿಗೆ ತಿಳಿಸುವುದು ಅಗತ್ಯವಿದೆ. ಅಲ್ಲದೇ ಅವರು ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಅವಶ‍್ಯಕತೆ ಇದೆ ಎಂದು ಹೇಳಿದರು.

ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಕೆ.ಆರ್. ಸಂಜಯ್, ಪತ್ರಕರ್ತ ರವಿ ಪಾಂಡವಪುರ, ಸಮಾಜ ಸೇವಕ ಕಾಟ್ನಾಳು ಲಕ್ಕೇಗೌಡ, ಹೇಮಂತ್ ಕುಮಾರ್, ರುಕ್ಮಿಣಿ ಚಂದನ್, ಭೋಜಪ್ಪ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ನೇಗಿಲಯೋಗಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

ವೇದಿಕೆಯಲ್ಲಿ ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ, ಆದಿಚುಂಚಗಿರಿ ಶಾಖಾ ಮಠದ ಶ‍್ರೀ ಸೋಮೇಶ್ವರನಾಥ ಸ್ವಾಮೀಜಿ, ಪ್ರೊ. ಜಯಪ್ರಕಾಶ್ ಗೌಡ, ಮಹಾಪೌರ ಎಂ.ಜೆ. ರವಿಕುಮಾರ್, ಶಾಸಕ ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: