
ಕರ್ನಾಟಕ
ವಿವಾಹಿತೆ ಜೊತೆ ಅಕ್ರಮ ಸಂಬಂಧ: ಪತಿಯಿಂದ ಹಲ್ಲೆಗೊಳಗಾದ ವ್ಯಕ್ತಿ ಸಾವು
ರಾಮನಗರ,ಜೂ.11: ವಿವಾಹಿತೆ ಜೊತೆ ಅಕ್ರಮ ಸಂಬಂಧದ ಹಿನ್ನೆಲೆ ಪತಿಯಿಯಿ ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕನಕಪುರ ತಾಲೂಕಿನ ಚಂಬಳಿಕೆದೊಡ್ಡಿ ಗ್ರಾಮದ ನಂಜಯ್ಯ ಮೃತ ದುರ್ದೈವಿ. ಮೃತ ನಂಜಯ್ಯ ವಿವಾಹಿತ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಯ ಜೊತೆ ಸುತ್ತಾಡಲು ಬೇರೆಡೆಗೆ ಕರೆದು ಕೊಂಡು ಆರು ದಿನಗಳ ನಂತರ ಗ್ರಾಮಕ್ಕೆ ಹಿಂದಿರುಗಿ ಬಂದಿದ್ದಾರೆ. ಇದರಿಂದ ಮಹಿಳೆಯ ಪತಿ ಕೋಪಗೊಂಡು ಜೂನ್ ನಂಜಯ್ಯನ ಮೇಲೆ ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದ, ನಂತರ ಹಲ್ಲೆಗೊಳಗಾಗಿದ್ದ ನಂಜಯ್ಯನನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ನಂಜಯ್ಯ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಪಿ.ಎಸ್ )