ಮೈಸೂರು

ಹೋಟೆಲ್ ಸಿಬ್ಬಂದಿಯೋರ್ವರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಪ್ರತಿಭಟನೆ

ಮೈಸೂರು,ಜೂ.11:- ಹುಬ್ಬಳ್ಳಿಯ ಹೋಟೆಲೊಂದರಲ್ಲಿ ಹೋಟೆಲ್ ಸಿಬ್ಬಂದಿಯೋರ್ವರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಮೈಸೂರಿನ ಹೋಟೆಲ್ ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಮೈಸೂರಿನ ನಳಪಾಕ್ ಹೋಟೆಲ್ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಹೋಟೆಲ್ ಸಿಬ್ಬಂದಿಗಳು ಹೋಟೆಲ್ ಸಿಬ್ಬಂದಿಗಳ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆಸಲಾಗುತ್ತಿದೆ. ಇದನ್ನು ನಾವು ಖಮಡಿಸುತ್ತೇವೆ. ಇದೇ ರೀತಿ ದೌರ್ಜನ್ಯ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದರು. ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: