ಮೈಸೂರು

ಯುವತಿ ಕೊಂದ ಆರೋಪಿಗಳಿಬ್ಬರಿಗೆ ಜೀವಾವಧಿ ಶಿಕ್ಷೆ

ಮೈಸೂರು,ಜೂ.12:- ಯುವತಿಯನ್ನು ಕೊಲೆ ಮಾಡಿದ್ದ ಇಬ್ಬರು ವ್ಯಕ್ತಿಗಳಿಗೆ ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ರಂಗನಾಥಪುರ ಗ್ರಾಮದ ಸ್ವಾಮಿ ಮತ್ತು ಶಂಕರ್ ಎಂಬವರು ನಂಜನಗೂಡು ಬಳಿ 2014ರ ಜನವರಿ 6ರಂದು ಯುವತಿಯೋರ್ವಳ ಕತ್ತು ಹಿಸುಕಿ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಈ ಕುರಿತು ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯ್ ಕುಮಾರ್ ಮತ್ತು ಎಂ. ಆನಂದ ಶೆಟ್ಟಿ  ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ವಕೀಲರಾದ ಹೆಚ್.ಡಿ.ಆನಂದ್ ವಾದ ಮಂಡಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: