ಮೈಸೂರು

ವರುಣಾ ಕ್ಷೇತ್ರದ ಜನತೆಗೆ ಕೃತಜ್ಞತೆ ಅರ್ಪಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ : ಸಂಜೆ ಇಫ್ತಾರ್ ಕೂಟಕ್ಕೆ

ಮೈಸೂರು,ಜೂ.12:-  ವಿಧಾನ ಸಭಾ ಚುನಾವಣೆ ನಂತರ ಮೊದಲ ಬಾರಿಗೆ ಮೈಸೂರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ.

ಇಂದು ವರುಣಾ ವಿಧಾನ ಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸುವ ಕುರಿತು ಸಭೆಯನ್ನು ಏರ್ಪಡಿಸಲಾಗಿದ್ದು, ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಕೃತಜ್ಞತಾ ಸಭೆ ನಡೆಯಲಿದೆ. ಕೃತಜ್ಞತಾ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಇದೀಗ ಬದಾಮಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಅವರು ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ತಮ್ಮ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ನಾಲೈದು ದಿನಗಳಿಂದ ಬಾದಾಮಿ ಪ್ರವಾಸಿ ಕೈಗೊಂಡಿದ್ದ ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದೀಗ ಮೈಸೂರಿಗೆ ಆಗಮಿಸಿದ್ದು, ತಮ್ಮ ಮಗನನ್ನು ಗೆಲ್ಲಿಸಿದ ವರುಣಾ ಜನತೆಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಮುಸ್ಲಿಂ ಬಾಂಧವರೊಂದಿಗೆ ಇಫ್ತಾರ್ ಕೂಟದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಖಾಸಗಿ ಹೋಟೆಲ್ ನಲ್ಲಿ ಮೈಸೂರು ಹಾಗೂ ಚಾಮರಾಜನಗರದಲ್ಲಿ ಗೆದ್ದಿರುವ ಹಾಗೂ ಸೋತಿರುವವವರ ಜೊತೆ ಸಭೆ ನಡೆಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: