ಪ್ರಮುಖ ಸುದ್ದಿ

ಅಧಿಕಾರ ದುರ್ಬಳಕೆ : ಕೆ.ರತ್ನಪ್ರಭಾ ಅವರ ವಿರುದ್ದ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು

ರಾಜ್ಯ(ಬೆಂಗಳೂರು) ಜೂ.12:- ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಆರೋಪದಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾಗಿದೆ.

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ತಮ್ಮ ಅಧಿಕಾರಾವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಉದ್ಯೋಗ ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ್ ದೇವೇಗೌಡ ಎಂಬವರು ಎಸಿಬಿಗೆ ದೂರು ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್  ಉದ್ಯೋಗ ಮತ್ತು ತರಬೇತಿ ಇಲಾಖೆಯ 62 ಮಂದಿ ನೌಕರರಿಗೆ ಹಿಂಬಡ್ತಿ ನೀಡುವಂತೆ ಆದೇಶಿಸಿತ್ತು. ಆದರೆ ರಾಜ್ಯ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರು ಸುಪ್ರೀಂ ಕೋರ್ಟ್ ಆದೇಶ ಜಾರಿಗೊಳಿಸದಂತೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ಕಾರ್ಯದರ್ಶಿಗೆ ಒತ್ತಡ ಹೇರಿದ್ದಾರೆ ಎಂದು  ಆರೋಪಿಸಿ ದೂರು ಸಲ್ಲಿಸಿದ್ದಾರೆ.

ರತ್ನಪ್ರಭಾ ವಿರುದ್ಧದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಂಕರ್, ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: