ಮೈಸೂರು

ಯಕ್ಷಗಾನ ಅಕಾಡೆಮಿ : ಲೇಖಕರಿಂದ ಅರ್ಜಿ ಆಹ್ವಾನ     

ಮೈಸೂರು, ಜೂ,12 : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ(ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮತ್ತು ಘಟ್ಟದಕೋರೆ) ಮೂಡಲಪಾಯ, ಯಕ್ಷಗಾನ, ತಾಳಮದ್ದಳೆ ಯಕ್ಷಗಾನ ಇತ್ಯಾದಿ ಕಲಾಪ್ರಕಾರಗಳಲ್ಲಿ 2017ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಜನವರಿಯಿಂದ ಡಿಸೆಂಬರ್ ರೊಳಗೆ  ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಆಹ್ವಾನಿಸಿದೆ.
ಯಕ್ಷಗಾನ ಮತ್ತು ಮೂಡಲಪಾಯ ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಅಭಿನಯ ಇತ್ಯಾದಿ), ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಯಕ್ಷಗಾನ ಪ್ರಸಂಗ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ. 25 ಸಾವಿರಗಳ ಬಹುಮಾನವನ್ನು ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು, ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡಭವನ, ಎರಡನೇ ಮಹಡಿ. ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-560002, ಇವರಿಗೆ ಜೂನ್ 23 ರೊಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22113146 ನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: