ಕರ್ನಾಟಕ

ರಂಜಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು : ಡಿವೈಎಸ್‍ಪಿ ಶ್ರೀನಿವಾಸ್ ಮೂರ್ತಿ

ರಾಜ್ಯ(ಮಡಿಕೇರಿ)ಜೂ.12:- ರಂಜಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್‍ಪಿ ಶ್ರೀನಿವಾಸ್ ಮೂರ್ತಿ ಸೂಚಿಸಿದರು.

ಸೋಮವಾರಪೇಟೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ರಂಜಾನ್ ಸಂದರ್ಭ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ರಂಜಾನ್ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ನಡೆಯುವುದಿಲ್ಲ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಖಬರಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ ಎಂದು ವಿವಿಧ ಮಸೀದಿಗಳ ಪ್ರಮುಖರಾದ ಕೆ.ಎ. ಯಾಕೂಬ್, ಯಾಸ್ಮೀನ್ ಪಾಷ, ಉಮ್ಮರ್, ರಫೀಕ್ ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಉಮೇಶ್, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಪ್ರಮುಖರಾದ ಹಸನಬ್ಬ, ಮಸಗೋಡು ಸುರೇಶ್, ಇಸ್ಮಾಯಿಲ್, ಮಣಿ, ಬಾಲಕೃಷ್ಣ, ಚಂದ್ರ ಮತ್ತಿತರರು ಇದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: