ಮೈಸೂರು

ಕಾರ್ಮಿಕ ವಿರೋಧಿ ಧೋರಣೆಗೆ ಖಂಡನೆ: ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಯನ್ನು ಖಂಡಿಸಿ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮೈಸೂರು ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಗಾಂಧಿ ಚೌಕದಲ್ಲಿರುವ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು. ಕಾರ್ಮಿಕರ ಬಡವರ ದುಃಸ್ಥಿತಿ ಕಾಣಿಸುವುದಿಲ್ಲ, ಅವರ ಕೂಗು ಕೇಳಿಸುವುದಿಲ್ಲ, ಅವರ ಕುರಿತು ಧ್ವನಿ ಎತ್ತಲಾಗುತ್ತಿಲ್ಲ ಎಂಬುದಕ್ಕೆ ಉದಾಹರಣೆಯಾಗಿ ಕಣ್ಣು, ಕಿವಿ, ಬಾಯಿ ಮುಚ್ಚಿದ ಮಾರುತಿಯ ವೇಷ ಧರಿಸಿ ಅಣಕು ಪ್ರದರ್ಶನ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಲೋಕಸಭಾ ಸದಸ್ಯ ಹೆಚ್. ವಿಶ್ವನಾಥ, ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಟಿ.ಎಸ್. ರವಿಶಂಕರ್, ಬಿ.ಜೆ. ವಿಜಯಕುಮಾರ್, ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ನ ಸದಸ್ಯರು ಪಾಲ್ಗೊಂಡಿದ್ದರು.

Leave a Reply

comments

Related Articles

error: