Uncategorizedಮೈಸೂರು

ಸಂಸ್ಕೃತ ಸಾಹಿತ್ಯದಲ್ಲಿ ರಾಷ್ಟ್ರತ್ವದ ಪರಿಕಲ್ಪನೆ: ವಿಚಾರ ಸಂಕಿರಣ

ನಂಜನಗೂಡಿನ  ಸುತ್ತೂರು  ಜೆಎಸ್ಎಸ್ ಸಂಸ್ಕೃತ  ಕಾಲೇಜಿನ ಅಲ್ಲಮಪ್ರಭು ಸಭಾಂಗಣದಲ್ಲಿ ಆಗಸ್ಟ್ 22ರಂದು ಬೆಳಿಗ್ಗೆ 10.30ಕ್ಕೆ ಸಂಸ್ಕೃತ ಸಾಹಿತ್ಯದಲ್ಲಿ ರಾಷ್ಟ್ರತ್ವದ ಪರಿಕಲ್ಪನೆ ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿವಿಯ ಕುಲಪತಿ ಪ್ರೊ. ಪದ್ಮಾ ಶೇಖರ್ ನೆರವೇರಿಸಲಿದ್ದು, ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ.ವೆಂಕಟೇಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕರ್ನಾಟಕ ಸಂಸ್ಕೃತ ವಿವಿಯ ಶಾಸ್ತ್ರ ನಿಕಾಯದ ಮುಖ್ಯಾಧಿಕಾರಿ ಪ್ರೊ.ಶ್ರೀನಿವಾಸ ವರಖೇಡಿ ಸಮಾರೋಪ ಭಾಷಣ ಮಾಡಲಿದ್ದು, ಕುಲಸಚಿವ ಡಾ.ವೈ.ಎಸ್.ಸಿದ್ದೇಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಾಡಿನ ಶ್ರೇಷ್ಠ ವಿದ್ವಾಂಸರು, ಸಂಪನ್ಮೂಲ ವ್ಯಕ್ತಿಗಳು, ಪ್ರಾಧ್ಯಾಪಕರು, ವಿವಿಧ ಸಂಸ್ಕೃತ ಕಾಲೇಜಿನ ಸಂಶೋಧನ ವಿದ್ಯಾರ್ಥಿಗಳು ಸೇರಿದಂತೆ ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಾಂಡಿಚೆರಿ ಮುಂತಾದ ಹೊರ ರಾಜ್ಯಗಳಿಂದ ಶ್ರೇಷ್ಠ ವಿದ್ವಾಂಸರು ಆಗಮಿಸಿ ಪ್ರಬಂಧ ಮಂಡಿಸಲಿದ್ದಾರೆ.

ಜಗದ್ಗುರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮ ಶತಮಾನೋತ್ಸವ ಅಂಗವಾಗಿ ನಡೆಯುವ ಈ ಕಾರ್ಯಕ್ರಮ ಜೆಎಸ್ಎಸ್ ಸಂಸ್ಕೃತ ಕಾಲೇಜು ಸುತ್ತೂರು ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಇವರ ಸಹಯೋಗದಲ್ಲಿ ನಡೆಯಲಿದೆ.

Leave a Reply

comments

Related Articles

error: