ಕರ್ನಾಟಕ

ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕರು ನೀರುಪಾಲು

ಶಿರಾ,ಜೂ.14-ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕು ಹಳೆಬಿಜ್ಜನಬೆಳ್ಳ ಗ್ರಾಮದಲ್ಲಿ ನಡೆದಿದೆ.

ಸಚಿನ್ (14), ಹರೀಶ್ (14) ನೀರು ಪಾಲಾದ ಬಾಲಕರು. ತಮ್ಮ ನಾಯಿಯ ಮೈತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪಿಎಸ್ಐ ಅವಿನಾಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಕೆಸಿಐ, ಎಂ.ಎನ್)

 

Leave a Reply

comments

Related Articles

error: